ದಿನಕ್ಕೊಂದು ಕಥೆ. 258

*🌻ದಿನಕ್ಕೊಂದು ಕಥೆ*🌻                                                *ಪುರಂದರದಾಸರು ವೈರಾಗ್ಯ ತಾಳಿದ ಘಟನ*.                                      ವಿಷ್ಣು ಬಡ ಬ್ರಾಹ್ಮಣನ ವೇಷದಲ್ಲಿ ಒಮ್ಮೆ ಶ್ರೀನಿವಾಸನ ಅಂಗಡಿಗೆ ಬಂದು ಮಗನ ಉಪನಯನಕ್ಕೆ ಹಣ ಬೇಡಿದನಂತೆ. ಜಿಪುಣ ಶ್ರೀನಿವಾಸ ಪ್ರತಿ ದಿನವೂ ಮಾರನೆಯ ದಿನ ಬರ ಹೇಳುತ್ತ, ಆರು ತಿಂಗಳುಗಳ ಕಾಲ ಮುಂದೆ ಹಾಕಿದನಂತೆ. ಕೊನೆಗೆ ಬ್ರಾಹ್ಮಣನ ಕಾಟ ತಡೆಯಲಾರದೆ ಒಂದು ಸವಕಲು ನಾಣ್ಯವನ್ನು ಕೊಟ್ಟನಂತೆ. ವಿಠ್ಠಲ ಈಗ ಶ್ರೀನಿವಾಸನ ಮನೆಗೆ ತೆರಳಿ ಆರು ತಿಂಗಳುಗಳ ಕಾಲ ಒಬ್ಬ ವರ್ತಕ ತನ್ನನ್ನು ಸತಾಯಿಸಿ ಕೊನೆಗೆ ಸವಕಲು ನಾಣ್ಯ ಕೊಟ್ಟ ಕಥೆ ಹೇಳಿದನಂತೆ. ಮಾರನೇ ದಿನ ಅದೇ ಬ್ರಾಹ್ಮಣ ಮನೆಗೆ ಬಂದು ಸರಸ್ವತಿಯ ಬಳಿ ತನ್ನ ಮಗನ ಉಪನಯನದ ಬಗ್ಗೆ ಹೇಳಿ ಅವಳಿಂದ ಸಹಾಯ ಯಾಚಿಸುತ್ತಾನೆ. ಸರಸ್ವತಿ ಮರುಕದಿಂದ ತನ್ನ ಬಳಿ ಯವುದೇ ಧನ ಆಭರಣಗಳಿಲ್ಲ ಎಲ್ಲವೂ ತನ್ನ ಗಂಡನ ಬಳಿ ಇದೆ. ಅವರ ಅನುಮತಿ ಇಲ್ಲದೇ ಏನನ್ನೂ ಕೊಡುವ ಪರಿಸ್ಥಿತಿಯಲ್ಲಿಲ್ಲ ಎಂದು ಬೇಸರ ಪಡುತ್ತಾಳೆ. *ಆಗ ಆ ಬ್ರಾಹ್ಮಣ ನಿನ್ನ ತವರಿನಲ್ಲಿ ನಿನಗೆ ಕೊಟ್ಟ ಮೂಗುತಿಯ ಮೇಲೆ ನಿನ್ನ ಅಧಿಕಾರವಿದೆ. ಅದನ್ನೇ ಕೊಡು ಎಂದಾಗ, ಅವನಿಗೆ ತನ್ನ ಮೂಗುತಿಯನ್ನು ತೆಗೆದು ಕೊಟ್ಟಳಂತೆ. ಬ್ರಾಹ್ಮಣ ತಕ್ಷಣ ಮೂಗುತಿಯನ್ನು ಶ್ರೀನಿವಾಸನ ಅಂಗಡಿಗೆ ಒಯ್ದು ಅದನ್ನು ಅಡವಿಡಲು ಪ್ರಯತ್ನಿಸಿ ದನಂತೆ. ಶ್ರೀನಿವಾಸ ಆ ಮೂಗುತಿಯನ್ನು ಗುರುತಿಸಿ, ಹಣಕ್ಕೆ ನಾಳೆ ಬರುವಂತೆ ಬ್ರಾಹ್ಮಣನಿಗೆ ಹೇಳಿ, ಅದನ್ನು ಡಬ್ಬಿಯಲ್ಲಿಟ್ಟು ತಕ್ಷಣ ಮನೆಗೆ ಬಂದು ಪತ್ನಿಯ ಬಳಿ ಮೂಗುತಿಯನ್ನು ತೋರಿಸಲು ಹೇಳಿದನಂತೆ.ಹೆದರಿದ ಹೆಂಡತಿ ಸ್ನಾನ ಮಾಡುವಾಗ ತೆಗೆದಿಟ್ಟಿದ್ದೆ ತರುತ್ತೇನೆಂದು ಒಳಗೆ ಹೋಗಿ, ಸ್ನಾನ ಕೊಠಡಿಯಲ್ಲಿ ವಿಷ ಕುಡಿಯುವ ಪ್ರಯತ್ನ ನಡೆಸಿದಾಗ ಅವಳ ವಿಷದ ಬಟ್ಟಲಿನೊಳಕ್ಕೆ ಮೇಲಿನಿಂದ ಮೂಗುತಿ ಬಿದ್ದಿತಂತೆ. ಅದನ್ನು ತಂದು ಶ್ರೀನಿವಾಸನಿಗೆ ಕೊಡುತ್ತಾಳೆ. ಅಂಗಡಿಗೆ ಹಿಂದಿರುಗಿ ಬಂದ ಶ್ರೀನಿವಾಸ ಡಬ್ಬಿಯನ್ನು ತೆಗೆದು ನೋಡಿದರೆ ಅಲ್ಲಿ ಇಟ್ಟಿದ್ದ ಮೂಗುತಿ ಮಾಯವಾಗಿತ್ತಂತೆ.ಆಗ ಅವನಿಗೆ ಬಂದ ಬ್ರಾಹ್ಮಣ ಬೇರೆ ಯಾರೂ ಅಲ್ಲ, ತನ್ನನ್ನು ಪರೀಕ್ಷಿಸಲು ಸ್ವತಃ ನಾರಾಯಣನೇ ಬ್ರಾಹ್ಮಣ ವೇಷದಲ್ಲಿ ಬಂದಿದ್ದನೆಂದು ಅರಿತು, ತನ್ನ ಬಗ್ಗೆ ತಾನೇ ನಾಚಿಕೆ ಪಟ್ಟುಕೊಂಡ ಶ್ರೀನಿವಾಸ, ತನ್ನ ಶ್ರೀಮಂತಿಕೆಯನ್ನು ತೊರೆದು ಹರಿದಾಸನಾಗುವ ನಿರ್ಧಾರ ತೆಗೆದು ಕೊಂಡ ನಂತೆ. ದೇವರ ದಾರಿ ತೋರಿಸಿದ್ದರ ಬಗ್ಗೆ ಕೃತಜ್ಞತೆಗಾಗಿ ತಮ್ಮ ಹೆಂಡತಿಯ ಜ್ಞಾಪಕಾರ್ಥ ಒಂದು ಕೀರ್ತನೆಯನ್ನೂ ಪುರಂದರದಾಸರು ರಚಿಸಿದ್ದಾರೆ. ನಂತರ ಶ್ರೀನಿವಾಸ ನಾಯಕ 'ಪುರಂದರ ದಾಸ' ಎಂಬ ಹೆಸರನ್ನು ಪಡೆದರು.                                              ಕೃಪೆ:ಗಲಗಲಿ ಸರ್.ಹೈಕ್ ಗ್ರೂಪ್ ಸದಸ್ಯರು.                  ಸಂಗ್ರಹ:ವೀರೇಶ್ ಅರಸಿಕೆರೆ.

Comments

Popular posts from this blog

ದಿನಕ್ಕೊಂದು ಕಥೆ 1031

ದಿನಕ್ಕೊಂದು ಕಥೆ 1055

ದಿನಕ್ಕೊಂದು ಕಥೆ 1059