ದಿನಕ್ಕೊಂದು ಕಥೆ. 631
*🌻ದಿನಕ್ಕೊಂದು ಕಥೆ🌻 ಸಿರಿಯ ಅಸಲಿ ಬೆಲೆ ಎಷ್ಟು?* ಇಂದಿದ್ದು ನಾಳೆ ಇಲ್ಲದಂತಾಗುವ ಈ ನಶ್ವರ ಪ್ರಪಂಚದ ಮೋಹವನ್ನು ಅಳೆದವರು ಸಂತರು, ಶರಣರು, ಮಹಂತರು. ಅವರಿಗೆ ಈ ಪ್ರಪಂಚದ ಸಿರಿ ಸಂಪದವೆಲ್ಲವೂ ಒಂದು ಹುಲ್ಲುಕಡ್ಡಿಯಂತೆ. ನಮಗಾದರೂ ಈ ಪ್ರಪಂಚವೇ ಸರ್ವಸ್ವ. ಧನಕನಕಾದಿಕಗಳಿಗಾಗಿ ನಾವು ಪ್ರಾಣ ಪಣಕ್ಕಿಟ್ಟು ಹೋರಾಡುತ್ತೇವೆ. ಅಮೂಲ್ಯವಾದ ಆಯುಷ್ಯವನ್ನು ವ್ಯರ್ಥ ಕಳೆಯುತ್ತೇವೆ. ಒಂದು ಗೇಣು ಭೂಮಿಗಾಗಿ ಮಹಾಭಾರತದಂಥ ಘನಘೋರ ಯುದ್ಧವೇ ನಡೆಯಿತು. ಅಣ್ಣ-ತಮ್ಮಂದಿರಾದ ಕೌರವರು, ಪಾಂಡವರು ಬದ್ಧ ವೈರಿಗಳಂತೆ ಹೋರಾಡಿ ಮಡಿದರು. ಒಂದು ಕ್ಷಣ ರೂಪದ ಆಕರ್ಷಣೆ ಒಳಗಾಗಿ ರಾಮಾಯಣ ನಡೆದುಹೋಯಿತು. ಸುಂದರವಾದ ಲಂಕಾ ಪಟ್ಟಣ ಬೂದಿಯಾಯ್ತು. ಮಹಾ ಶಿವಭಕ್ತನಾದ ರಾವಣ ಅಸುನೀಗಿದೆ. ಅಪಾರ ಜೀವಹಾನಿ ಸಂಭವಿಸಿತು. ಇಂಥಾ ನಶ್ವರ ಸಂಪತ್ತಿನ ಮೋಹವು ಸಂತರು, ಶರಣರ ಬಳಿ ಎಂದೂ ಸುಳಿಯಲಿಲ್ಲ. ಚೀನಾ ದೇಶದ ಸಂತ ಲಾವೋತ್ಸೆ ನಾವೆಯಲ್ಲಿ ಕುಳಿತು ನದಿ ದಾಟುತ್ತಿದ್ದ . ಅದೇ ನಾವೆಯಲ್ಲಿ ಒಬ್ಬ ಸಿರಿವಂತನಿದ್ದ . ಸಂತನನ್ನು ಕಂಡು ವಂದಿಸಿ ಚಿನ್ನದ ಸರವನ್ನು ಕಾಣಿಕೆಯಾಗಿ ಕೊಟ್ಟ. ತಕ್ಷಣ ಸಂತ ಆ ಸರವನ್ನು ನದಿಗೆ ಎಸೆದ. ಸಿರಿವಂತನು ನೀರಿಗಿಳಿದು ಅದನ್ನು ತಂದ. 'ಸಂತರೆ ಇದು ಚಿನ್ನದ ಸರ. ಇದರ ಬೆಲೆ ಎಷ್ಟು ನಿಮಗೆ ಗೊತ್ತೇ?' ಎಂದು ಕೇಳಿದ. ಸಂತ ಲಾವೋತ್ಸೆ ಹೇಳಿದ, ''ಅದರ ಬೆಲೆ ನಿನ್ನನ್ನು ನೀರಿಗೆ ಜಿಗ