ದಿನಕ್ಕೊಂದು ಕಥೆ. 694
ದಿನಕ್ಕೊಂದು ಕಥೆ *ನಿರ್ಮಲ ಟೀಚರ್ ನ ನಿರ್ಮಲ ಮನಸ್ಸು* ತಿರುಪತಿ ತಿಮ್ಮಪ್ಪಗೆ ಉದ್ಯಮಿ ಹಾಗು ರಾಜಕಾರಣಿಯೊಬ್ಬರು 40 ಕೋಟಿ ರೂ. ಮೌಲ್ಯದ ವಜ್ರ ಖಚಿತ ಬಂಗಾರದ ಕಿರೀಟವನ್ನು ಅರ್ಪಿಸಿದ್ದರು. ಮತ್ತೋರ್ವ ಉದ್ಯಮಿ ಹಾಗು ರಾಜಕಾರಣಿಯೊಬ್ಬರು ಶಬರಿಮಲೈ ಅಯ್ಯಪ್ಪಸ್ವಾಮಿ ದೇಗುಲಕ್ಕೆ 10 ಕೋಟಿ ಮೌಲ್ಯದ ಚಿನ್ನದ ಮೆಟ್ಟಿಲುಗಳನ್ನುಮಾಡಿಸಿಕೊಟ್ಟರು. ನಮ್ಮೂರ ಉದ್ಯಮಿ ಹಾಗು ಹಾಗು ರಾಜಕಾರಣಿಯೊಬ್ಬರು ಊರ ದೇವತೆಯ ದೇಗುಲದ ಬಾಗಿಲುಗಳಿಗೆ 50 ಲಕ್ಷ ರೂ. ಮೌಲ್ಯದ ಬೆಳ್ಳಿಯ ಹೊದಿಕೆ ಸಮರ್ಪಿಸಿದರು. ಮೇಲಿನ ಮೂರೂ ಘಟನೆಗಳನ್ನು ನಾನು ವರದಿ ಮಾಡಿದ್ದೆ. ಹೀಗೆ ಈ ಸುದ್ದಿಗಳನ್ನು ಬರೆಯುವಾಗ ದೇಣಿಗೆ ನೀಡಿದವರ ಕುರಿತು “ಎಂಥ ದಾನಿಗಳಪ್ಪ” ಎಂಬ ಅಭಿಮಾನದ ಭಾವನೆ ಮೂಡಿತಾದರೂ ಮತ್ತೊಂದು ಕಡೆ ಮನಸ್ಸು ಹೇಳುತ್ತಿತ್ತು “ಇವರುಗಳಿಗೆ ಇದು ಯಾವ ಲೆಕ್ಕ” ಎಂದು. ಆದರೂ ಉಳ್ಳವರು ಎಲ್ಲರೂ ಇಷ್ಟೊಂದು ದೇಣಿಗೆ ನೀಡುವರೇ ಎಂಬ ಪ್ರಶ್ನೆ ಮೂಡಿ ಮೇಲಿನವರ ಬಗ್ಗೆ ಹೆಮ್ಮೆ ಎನ್ನಿಸುತ್ತಿತ್ತು. ಇದೊಂದು ಘಟನೆ ನನಗೆ ಮೇಲಿನ ಮೂರೂ ಘಟನೆಗಳನ್ನು ಮರೆಯುವಂತೆ ಮಾಡಿತ್ತು. ಮೇಲ್ಕಾಣಿಸಿದ ದಾನಿಗಳಿಗಿಂತ ಈ 1 ಸಾವಿರ ರೂ. ಬಹುಮಾನ ನೀಡಿದ್ದ ಹೈಸ್ಕೂಲ್‍ನ ಮೇಡಂ ತುಂಬಾ ದೊಡ್ಡವರು ಎನ್ನಿಸಿದರು. ಅವರ ಸ್ವಾಭಿಮಾನ, ಮಾತಿಗೆ ತಪ್ಪದ ನಡತೆ ಹಾಗೂ ತಮ್ಮ ವಿದ್ಯಾರ್ಥಿಗಳ ಮೇಲೆ ಅವರು ಇಟ್ಟಿದ್ದ