ದಿನಕ್ಕೊಂದು ಕಥೆ 898
*🌻ದಿನಕ್ಕೊಂದು ಕಥೆ🌻* *ಇನೋಬ್ಬರಿಗೆ ಕೇಡು ಬಯಸಿದರೆ ಏನಾಗುತ್ತೆ..* ಫಲವತ್ತಾದ ಇಪ್ಪತ್ತೈದು ಎಕರೆ ತೋಟದ ಭೂಮಿಯ ಒಡೆಯನಾಗಿದ್ದ ನಿಂಗಪ್ಪ ಅನಕ್ಷರಸ್ಥನಾಗಿದ್ದ. ಓದಲು ಬರೆಯಲು ಬಾರದೆ ತಾನು ಅನುಭವಿಸಿದ ಕಷ್ಟಗಳನ್ನು ತನ್ನ ಮಗ ಅನುಭವಿಸಬಾರದೆಂದು ನಿರ್ಧರಿಸಿದ್ದ. ಕಷ್ಟಪಟ್ಟು ಮಗನನ್ನು ವಿದ್ಯಾವಂತನನ್ನಾಗಿ ಮಾಡಿದ್ದ. ಆತನ ಹೆಸರು ವಿನಯ. ನಿಜಕ್ಕೂ ವಿನಯವಂತನಾಗಿದ್ದ. ಪಟ್ಟಣದ ಹಾಸ್ಟೆಲ್ನಲ್ಲಿ ಇದ್ದುಕೊಂಡು, ಹಗಲಿರುಳೂ ಓದಿ, ಉನ್ನತ ಶ್ರೇಣಿಯಲ್ಲಿ ಕೃಷಿ ಪದವಿಯನ್ನು ಪಡೆದುಕೊಂಡಿದ್ದ. ಸರ್ಕಾರಿ ನೌಕರಿಯ ಕನಸು ಕಾಣದ ಆತ ದಿನವೂ ಪಂಚೆ ಉಟ್ಟುಕೊಂಡು, ತಲೆಗೆ ಟವಲ್ಲು ಸುತ್ತಿಕೊಂಡು ಅಪ್ಪನೊಡನೆ ಹೊಲದಲ್ಲಿ ಮಣ್ಣಿನ ಮಗನಾಗಿ ಬೆವರು ಸುರಿಸಿ ದುಡಿಯುತ್ತಿದ್ದ. ತಾನು ಕಲಿತ ಕೃಷಿ ಪದವಿಯ ಜ್ಞಾನವನ್ನು ಬಳಸಿಕೊಂಡು ಹೊಸ ಕೃಷಿ ಚಟುವಟಿಕೆಗಳನ್ನು ನಡೆಸುತ್ತಿದ್ದ. ತಾತನ ಕಾಲದಿಂದಲೂ ತನ್ನಪ್ಪ ಬೆಳೆಯುತ್ತಿದ್ದ ನಾಟಿ ದ್ರಾಕ್ಷಿ ತೋಟದಲ್ಲಿ ಹೊಸ ತಳಿಯ ಬೀಜರಹಿತ ಕಪ್ಪು ದ್ರಾಕ್ಷಿ ಸಸಿಗಳನ್ನು ವಿನಯ ನಾಟಿ ಮಾಡಿದ. ಅವುಗಳ ಬುಡಕ್ಕೆ ಹನಿ ಹನಿಯಾಗಿ ನೀರು ತೊಟ್ಟಿಕ್ಕುವಂತೆ ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಿದ. ಹಾಗಾಗಿ ಬಹಳ ಬೇಗನೆ ದ್ರಾಕ್ಷಿ ಸಸಿಗಳು ಆಳೆತ್ತರಕ್ಕೆ ಬೆಳೆದುನಿಂತವು. ಮಾರುದ್ದ ಅಂತರದಲ್ಲಿ ಕಲ್ಲಿನ ಕಂಬಗಳನ್ನು ನೆಟ್ಟು ನಿರ್ಮಿಸಿದ್ದ ಚಪ್ಪರದ ತುಂಬ ಬಳ್ಳಿಯಾಗಿ ಹರಡಿಕೊಂಡವು. ಕೆಲ ತಿಂಗಳುಗಳು ಕಳೆಯುತ್ತಲೇ ದ್ರಾಕ್ಷಿ ಬಳ್ಳಿಗ