ದಿನಕ್ಕೊಂದು ಕಥೆ 951
ದಿನಕ್ಕೊಂದು ಕಥೆ ಹವ್ಯಾಸ ಬದಲಿಸಿದರೆ ಹಣೆಬರಹ ಬದಲಾದೀತು! ಇದು ಎರಡು ಓಟೆಗಳ ಕಥೆ. ಒಮ್ಮೆ ಒಬ್ಬ ಗೃಹಿಣಿ ಎರಡು ಮಾವಿನ ಹಣ್ಣಿನ ಓಟೆಗಳನ್ನು ತಿಪ್ಪೆಯ ಮೇಲೆ ಬಿಸಾಡಿದಳು. ಒಂದು ಓಟೆ ಯೋಚನೆ ಮಾಡಿತು ನನ್ನ ಬೇರುಗಳು ಭೂಮಿಯೊಳಕ್ಕೆ ಹೋಗುತ್ತವೆ, ಅಂತರ್ಜಲವನ್ನು ಹೀರಿಕೊಳ್ಳುತ್ತವೆ, ತಿಪ್ಪೆಯ ಗೊಬ್ಬರ ಪೌಷ್ಟಿಕಾಂಶ ಕೊಡುತ್ತದೆ, ಸಸಿಯಾಗುತ್ತೇನೆ, ನಂತರ ಸಣ್ಣ ಗಿಡವಾಗುತ್ತೇನೆ, ಕಾಲಂತರದಲ್ಲಿ ದೊಡ್ಡ ಮರವಾಗಿ ಬೆಳೆಯುತ್ತೇನೆ. ಮಾವಿನ ಸೊಪ್ಪು, ರುಚಿಕರ ಮಾವಿನ ಹಣ್ಣನ್ನು ಕೋಡುತ್ತೇನೆ. ನೂರಾರು ವರ್ಷಗಳು ಬದುಕುತ್ತೇನೆ ಎಂದು ಯೋಚಿಸಿ ಅದರಂತೆಯೇ ಬೆಳೆಯಿತು, ಬದುಕಿತು. ಅದರ ಪಕ್ಕದಲ್ಲೇ ಇದ್ದ ಮತ್ತೊಂದು ಓಟೆ ನನ್ನ ಬೇರುಗಳಿಗೆ ಅಂತರ್ಜಲ ಸಿಕ್ಕದಿದ್ದರೇ? ಪೌಷ್ಟಿಕಾಂಶ ಸಿಗದಿದ್ದರೇ? ಗಿಡವಾದಾಗ ಕುರಿ ಮೇಕೆಗಳು ಬಂದು ತಿಂದುಬಿಟ್ಟರೇ? ಮರವಾಗಿ ಹಣ್ಣು ಬಿಡುವಾಗ, ಜನ ಹಣ್ಣು ಉದುರಿಸಲು ಕಲ್ಲು ಹೊಡೆದರೆ ನನಗೆ ನೋವಾಗುದಿಲ್ಲವೇ? ಎಂದೆಲ್ಲ ಯೋಚಿಸಿ ಬೇರನ್ನು ಕೆಳಗೆ ಬಿಡದೆ, ಮೇಲೆ ಸಸಿಯಾಗಿ ಬೆಳೆಯದೆ ಹಾಗೆಯೇ ಉಳಿಯಿತು. ಕೆಲವೇ ದಿನಗಳಲ್ಲಿ ತಿಪ್ಪೆಯಲ್ಲಿನ ಗೊಬ್ಬರದೊಂದಿಗೆ ಗೊಬ್ಬರವಾಗಿ ಬೆರೆತು ಹಾಳಾಗಿ ಹೋಯಿತು. ಮೊದಲನೆಯ ಓಟೆಯ ಮನೋಭಾವ ಸಕಾರಾತ್ಮಕ. ಎರಡನೆಯ ಓಟೆಯ ಮನೋಭಾವ ನಕಾರಾತ್ಮಕ. ಸಕಾರಾತ್ಮಕ ವಾಗಿದ್ದ ಓಟೆ ಬೆಳೆದು ದಶಕಗಳ ಕಾಲ ಉಳಿಯಿತು. ಆದರೆ ನಕಾರಾತ್ಮಕವಾಗಿದ್ದ ಓಟೆ ಒಂದೆರಡು ವಾರಗಳಲ್ಲೇ ಮರೆಯಾಗಿ ಹೋಯಿತು. ನೀಜ ಜೀವನದಲ್ಲೂ ಸಹ