ದಿನಕ್ಕೊಂದು ಕಥೆ 956
🌻ದಿನಕ್ಕೊಂದು ಕಥೆ 🌻 ಬೆರಗಿನ ಬೆಳಕು ಡಾ.ಗುರುರಾಜ ಕರ್ಜಗಿ ಸಂಗ್ರಹ : ಪ್ರಜಾವಾಣಿ ಪತ್ರಿಕೆ ಪರರ ಕೃಪೆ ಇಲ್ಲದ ಸಾಧನೆ ಬೋಧಿಸತ್ವ ಒಂದು ಸ್ವರ್ಣಹಂಸೆಯಾಗಿ ಹುಟ್ಟಿದ್ದ. ಆತನಿಗೆ ತಮ್ಮನೊಬ್ಬನಿದ್ದ. ಇಬ್ಬರೂ ಯಾವಾಗಲೂ ಜೊತೆಯಾಗಿಯೇ ಇರುತ್ತಿದ್ದರು. ಅವರು ಬದುಕಿದ್ದು ಚಿತ್ರಕೂಟದ ಪರ್ವತ ಪ್ರದೇಶದಲ್ಲಿ. ಆದರೆ, ದಿನವೂ ಹಿಮಾಲಯದ ಪರ್ವತಗಳಿಗೆ ಹಾರಿ ಹೋಗಿ ಅಲ್ಲಿ ದೊರೆಯುವ ಅತ್ಯುತ್ತಮ ಕಾಳುಗಳನ್ನು ತಿಂದು ಬರುತ್ತಿದ್ದರು. ಒಂದು ದಿನ ಹೀಗೆ ಕಾಳುಗಳನ್ನು ತಿಂದು ಹಾರಿಬರುವಾಗ ಮತ್ತೊಂದು ದಾರಿಯನ್ನು ಹಿಡಿದು ಬಂದರು. ದಾರಿಯಲ್ಲಿ ಒಂದು ಹೊಳೆ ಹೊಳೆವ ಪರ್ವತವನ್ನು ಕಂಡವು. ಕುತೂಹಲದಿಂದ ಆ ಪರ್ವತದ ಶಿಖರಗಳ ಮೇಲೆ ಇಳಿದು ನೋಡಿದಾಗ ಅವರಿಗೊಂದು ಆಶ್ಚರ್ಯ ಕಾದಿತ್ತು. ಅದೊಂದು ಕಂಚಿನ ಪರ್ವತ. ಅದರ ಹೆಸರು ನೆರು. ಈ ನೆರು ಪರ್ವತದ ಮೇಲೆ ವಾಸ ಮಾಡುತ್ತಿದ್ದ ಎಲ್ಲ ಪಕ್ಷಿ, ಪ್ರಾಣಿಗಳು ಬಂಗಾರದ ಬಣ್ಣದಾಗಿದ್ದವು. ಇದರ ವಿಷಯವಾಗಿ ವಿಚಾರಿಸಿದಾಗ ತಿಳಿದು ಬಂದದ್ದಿಷ್ಟು. ಇವೆಲ್ಲ ಸಾಮಾನ್ಯವಾದ ಪಶು-ಪಕ್ಷಿಗಳು. ಬೇರೆ ಪರ್ವತಗಳಲ್ಲಿದ್ದಾಗ ಅವು ತಮ್ಮ ತಮ್ಮ ನೈಸರ್ಗಿಕ ಬಣ್ಣಗಳಲ್ಲೇ ಇರುತ್ತವೆ. ಆದರೆ, ಈ ಕಂಚಿನ ಪರ್ವತದ ಮೇಲೆ ಬಂದೊಡನೆ ಅವು ಸ್ವರ್ಣದ ಬಣ್ಣವನ್ನು ತಳೆಯುತ್ತವೆ. ಅಲ್ಲಿ ಹಾರಾಡುತ್ತಿದ್ದ ಗರುಡನನ್ನು ಈ ವಿಷಯದ ಬಗ್ಗೆ ಕೇಳಿದಾಗ ಅದು ಹೇಳಿತು, ’ಈ ಪರ್ವತಕ್ಕೆ ಬಂದೊಡನೆ ಎಲ್ಲರೂ ಸಮಾನರೇ ಆಗಿಬಿಡುತ್ತಾರೆ. ಇಲ್ಲಿ ಕಾಡು ಕಾಗೆ,