ದಿನಕ್ಕೊಂದು ಕಥೆ 980
*🌻ದಿನಕ್ಕೊಂದು ಕಥೆ🌻* *ಮನೆಯಲ್ಲಿರುವುದೇನು ಕರಿನೀರ ರೌರವಕ್ಕಿಂತ ಹೆಚ್ಚಿನದ್ದೇ?* ಗೂಡಿನಂತಹಾ ಕಗ್ಗತ್ತಲ ಕೊಠಡಿ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ, ಮಧ್ಯಾಹ್ನ 12ರಿಂದ 5 ಗಂಟೆಯವರೆಗೆ ಗೋಡೆ ಕಡೆ ಮುಖ ಮಾಡಿ ನಿಲ್ಲಿಸಿ ಕೈಗಳಿಗೆ ಬೇಡಿ ಹಾಕುತ್ತಿದ್ದರು. ಸೊಂಟದ ಸುತ್ತ ಬಿಗಿದು ಬರುವ ಎರಡು ಎಳೆಗಳನ್ನು ಪಾದಗಳೆರಡಕ್ಕೂ ಬಿಗಿದು ಹಾಕುವ ಕಂಬಿ ಬೇಡಿ ಎಂದು ಕರೆಯಲ್ಪಡುವ ಸ್ಥಿತಿಯಲ್ಲಿ ಕಾಲನ್ನು ಕಿಂಚಿತ್ತೂ ಮಡಿಸದೆ ತಿಂಗಳುಗಟ್ಟಲೆ ಇರಬೇಕಿತ್ತು! ಕೈಗಳನ್ನು ಹಿಂದಕ್ಕೆ ಸರಿಸಿ ಬೇಡಿ ಹಾಕುವುದು ಇನ್ನೊಂದು. ಮಗದೊಂದು ಅಡ್ಡಕಂಬಿ ಬೇಡಿ - ಎರಡೂ ಕಾಲುಗಳನ್ನು ಒಂದಡಿಗಿಂತಲೂ ಹೆಚ್ಚು ದೂರದಲ್ಲಿರಿಸಿ ಹಾಕಲಾಗುತ್ತಿತ್ತು. ವಾರಗಟ್ಟಲೆ, ಕೆಲವೊಮ್ಮೆ ತಿಂಗಳುಗಟ್ಟಲೆ ಊಟ, ನಿದ್ರೆ, ವಿಸರ್ಜನೆ, ಓಡಾಟ, ಕೆಲಸ ಎಲ್ಲವನ್ನೂ ಇದೇ ಸ್ಥಿತಿಯಲ್ಲಿ ಮಾಡಬೇಕು. ಕೇಳಿದರೆ ಮೈಜುಮ್ಮೆನಿಸುವ ಶಿಕ್ಷೆ. ಇದು ಯಾರು ಕಾಣದ, ಅನುಭವಿಸದ ಶಿಕ್ಷೆ. ಇದು ಅಂಡಮಾನಿನಲ್ಲಿ ಹನ್ನೊಂದು ವರ್ಷ ವೀರ ಸಾವರ್ಕರ್ ಅನುಭವಿಸಿದ, ನರಕಯಾತನೆ ಪಟ್ಟ ಕರಿನೀರ ಶಿಕ್ಷೆ! ಮಾರ್ಸೆಲ್ಸಿನಲ್ಲಿ ಮೊರಿಯಾ ಹಡಗಿನ ಶೌಚ ಕೊಠಡಿಯ ಕಿರು ಗವಾಕ್ಷದಿಂದ ಯೋಗಶಕ್ತಿಯಿಂದ ದೇಹವನ್ನು ಸಂಕುಚಿಸಿ ಸಮುದ್ರಕ್ಕೆ ಹಾರಿ ಈಜಿದಂತೆ ಅಂಡಮಾನಿಗೆ ಹೊರಟ ಮಹಾರಾಜ ಹಡಗಿನಿಂದ ತಪ್ಪಿಸಿಕೊಳ್ಳಲು ವೀರ ಸಾವರ್ಕರರಿಗೆ ಯಾವುದೇ ಮಾರ್ಗಗಳಿರಲಿಲ್ಲ. ಕೈಕಾಲುಗಳೆಲ್ಲದಕ್ಕೂ ಬೇಡಿ ಹಾಕಲಾಗಿತ್ತು. ಮಾತ್ರವಲ್ಲ