ದಿನಕ್ಕೊಂದು ಕಥೆ 1025
*🌻ದಿನಕ್ಕೊಂದು ಕಥೆ🌻* *ಕಂಠಿಹಾರದ ಕಳ್ಳ* ಒಮ್ಮೆ ಅಕ್ಬರ್ ತನ್ನ ಪ್ರೀತಿಯ ರಾಣಿಗೆ ಬೆಲೆಬಾಳುವ ಕಂಠೀಹಾರವನ್ನು ಉಡುಗರೆಯಾಗಿ ತಂದುಕೊಟ್ಟನು. ರಾಣಿಗೆ ಆ ಕಂಠೀ ಹಾರವನ್ನು ನೋಡಿ ಬಹಳ ಸಂತೋಷವಾಯಿತು. ಪ್ರಭು ನೀವು ಪ್ರೀತಿಯಿಂದ ತಂದುಕೊಟ್ಟ ಈ ಬೆಲೆಬಾಳುವ ಹಾರವನ್ನು ನಾನು ಬಹಳ ಜೋಪಾನವಾಗಿ ನೋಡಿಕೊಳ್ಳುವೆ. ನಾನು ತುಂಬಾ ಅದೃಷ್ಟವಂತೆ ಎಂದು ಹೇಳಿದಳು. ರಾಜನು "ನಿನಗೆ ಸಂತೋಷವಾಗುತ್ತದೆ ಎಂದು ರಾಜ್ಯದ ಕುಶಲಕರ್ಮಿಗಳಿಂದ ಈ ಬೆಲೆಬಾಳುವ ಕಂಠಿ ಹಾರವನ್ನು ಮಾಡಿಸಿದೆ. ನಿನಗೆ ಇಷ್ಟವಾದರೆ ನನಗೆ ಸಂತೋಷ "ಎಂದನು. ಆಗ ರಾಣಿಯು, ಈ ಹಾರ ನನಗೆ ತುಂಬಾ ಇಷ್ಟವಾಗಿದೆ. ನನ್ನ ಜೀವಮಾನ ಪರ್ಯಂತ ಜೋಪಾನವಾಗಿ ಕಾಪಾಡುವೆ ಎಂದಳು. ರಾತ್ರಿ ಸರವನ್ನು ತೆಗೆದು ಮೇಜಿನ ಮೇಲೆ ಇಟ್ಟು ಮಲಗಿದಳು. ಮರುದಿನ ಬೆಳಗ್ಗೆ ರಾಣಿಯು ಕಂಠಿ ಹಾರವನ್ನು ಮತ್ತೊಮ್ಮೆ ನೋಡಬೇಕೆಂದು ತೆಗೆದುಕೊಳ್ಳಲು ಹೋದಳು. ಆದರೆ ಅವಳಿಟ್ಟ ಜಾಗದಲ್ಲಿ ಆ ಕಂಠಿಹಾರ ಇರಲಿಲ್ಲ. ರಾತ್ರಿ ಮಲಗುವಾಗ ಅದನ್ನು ತೆಗೆದು ಟೇಬಲ್ಲಿನ ಮೇಲೆ ಇಟ್ಟಿದ್ದಳು. ಅವಳಿಗೆ ಅದು ಚೆನ್ನಾಗಿ ನೆನಪಿದೆ. ಆದರೆ ಈಗ ಹಾರ ಕಾಣುತ್ತಿಲ್ಲ ಎಲ್ಲಾ ಕಡೆ ಹುಡುಕಿದರೂ ಅದು ಸಿಗಲಿಲ್ಲ. ಆಗ ಅವಳು ತನ್ನ ದಾಸಿಯನ್ನು ಕರೆದು ನಿನ್ನೆ ನನಗೆ ಮಹಾರಾಜರು ತಂದುಕೊಟ್ಟ ಕಂಠಿಹಾರ ಇಲ್ಲೇ ಇಟ್ಟಿದ್ದೆ. ಅದು ಕಳೆದುಹೋಗಿದೆ ನನಗೆ ಹುಡುಕಿಕೊಡು ಎಂದಳು. ದಾಸಿಯು ಮಹಾರಾಣಿ ನೀವು ಚಿಂತಿಸಬೇಡಿ ನಾನು ಹುಡುಕಿ ಕೊಡವೆ ಆದರ