Posts

Showing posts from October, 2022

ದಿನಕ್ಕೊಂದು ಕಥೆ 1056

*🌻ದಿನಕ್ಕೊಂದು ಕಥೆ🌻*                                                                     *ದೇವರಾದ ಡಾಕ್ಟರ್*                           ಅರ್ಧರಾತ್ರಿಯ ಸಮಯ. ಆ ಡಾಕ್ಟರ್ ತಮ್ಮ ಕೆಲಸವೆಲ್ಲಾ ಮುಗಿಸಿ ಮಲಗಿ ಹತ್ತು ನಿಮಿಷವಾಗಿಲ್ಲ, ಯಾರೋ ಬಾಗಿಲು ತಟ್ಟಿದರು.     ‌ಡಾಕ್ಟರು ಬಹಳ ನಿಯತ್ತಿನ ಮನುಷ್ಯ. ಬೇಸರ ಪಟ್ಟುಕೊಳ್ಳದೆ ಹೋಗಿ ತೆಗೆದರು. ಬಂದ ಮನುಷ್ಯ ಇವರ ಕಾಲು ಹಿಡಿದುಕೊಂಡು "ಸಾರ್, ಒಬ್ಬ ಗರ್ಭಿಣಿ ಹೆಂಗಸು ಬಹಳ ಪ್ರಸವವೇದನೆ ಅನುಭವಿಸುತ್ತಿದ್ದಾಳೆ ಸಾರ್. ಆಕೆಯನ್ನು ನೀವೇ ಕಾಪಾಡಬೇಕು ಸಾರ್. ದಯಮಾಡಿ ನೀವೇ ಬಂದು ಅವಳನ್ನು ಉಳಿಸಬೇಕು, ಆಗಲ್ಲ ಅನ್ನಬೇಡಿ ಸಾರ್" ಎಂದು ಅಲವತ್ತುಕೊಂಡ.  ಸುಮಾರು ೭೦ ವರ್ಷಗಳ ಕೆಳಗೆ ಮಹಾರಾಷ್ಟ್ರದ ಮೂಲೆಯಲ್ಲೊಂದು ಗ್ರಾಮದಲ್ಲಿನ ಡಾಕ್ಟರ್ ಅವರು. ತಕ್ಷಣ ಅವನೊಂದಿಗೆ ಹೊರಟರು.     ಆ ಹೆಂಗಸು ೧೯-೨೦ರ ವಯಸ್ಸಿನವಳಿದ್ದಿರಬೇಕು ಎಂದು ತಿಳಿಯಿತು. ಪ್ರಸವ ನಿಜಕ್ಕೂ ಕಷ್ಟದಾಯಕ ವಾಗಿತ್ತು ಆಕೆಗೆ. ಬೆಳಗಿನ ಜಾವವಾಗಿತ್ತು ಆಗ. ಆ ಹೆಂಗಸು ಡಾಕ್ಟರ ಕೈಹಿಡಿದುಕೊಂಡು "ಡಾಕ್ಟರ್ ಸಾಹೇಬರೇ, ನನ್ನ ಗಂಡ ನನ್ನ ಬಿಟ್ಟು ಹೋದ. ನಾನು ದಟ್ಟ ದಾರಿದ್ರ್ಯದಲ್ಲಿದ್ದೇನೆ. ನಾನು ಹುಟ್ಟುವ ಮಗುವನ್ನು ಸಾಕುವ ಸ್ಥಿತಿಯಲ್ಲಿ ಇಲ್ಲ. ನನ್ನನ್ನು ಉಳಿಸಬೇಡಿ. ಬೇಡಿಕೊಳ್ಳುತ್ತೇನೆ ನನ್ನನ್ನು ಸಾಯಿಸಿಬಿಡಿ. ಬದುಕಿ ಏನೂ ಉಪಯೋಗವಿಲ್ಲ".     ಡಾಕ್ಟರ್ ಗೇ ಮನಸ್ಸಿನಲ್ಲಿ ಕಸಿವಿಸಿ