ದಿನಕ್ಕೊಂದು ಕಥೆ 1058
*🌻ದಿನಕ್ಕೊಂದು ಕಥೆ*🌻 ನಮ್ಮ ಜೀವನಕ್ಕೊಂದು ಮಾದರಿ ಪಾಠ.... *ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು.*..!!🌟 *ಗಳಗನಾಥರು:-* 🙏🏻 ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ ಪುಣ್ಯಾತ್ಮರು ಇವರು.ಸತ್ತಮೇಲೆ ಅಂತ್ಯಸಂಸ್ಕಾರ ಮಾಡಲೂ ಇವರ ಮನೆಯವರ ಬಳಿ ಹಣವಿರಲಿಲ್ಲ. ಪುಸ್ತಕಗಳಿಂದಲೇ ಇವರ ಅಂತ್ಯಸಂಸ್ಕಾರ ಮಾಡಬೇಕಷ್ಟೇಯೆಂದು ಅವರ ಮನೆಯವರು ಅ ಸಂದರ್ಭದಲ್ಲಿ ನೊಂದುಕೊಂಡು ನುಡಿದಿದ್ದರು. *ವಿ.ಸೀತಾರಾಮಯ್ಯ*🙏🏻 ಇವರು ದಿನಾ ಬೆಳಿಗ್ಗೆ ಹೊಟೇಲಿನಿಂದ ಹತ್ತು ಇಡ್ಲಿ ತರಿಸುತ್ತಿದ್ದರಂತೆ.ಅದರಲ್ಲಿ ಒಂದು ಇಡ್ಲಿಯನ್ನಷ್ಟೇ ತಾವು ತಿಂದು ಉಳಿದ ಒಂಬತ್ತು ಇಡ್ಲಿಯನ್ನು ಪ್ರಾಣಿ ಪಕ್ಷಿಗಳಿಗೆ ತಿನ್ನಿಸುತ್ತಿದ್ದರು.ಇದನ್ನು ಅವರು ತಮ್ಮ ಬದುಕಿನುದ್ದಕ್ಕೂ ದಿನಚರಿಯಂತೆ ಪಾಲಿಸುತ್ತಿದ್ದರು. *ದ.ರಾ.ಬೇಂದ್ರೆ:-*🙏🏻 ಇವರೊಮ್ಮೆ ದಾರಿಯಲ್ಲಿ ನಡೆದುಕೊಂಡು ಬರಬೇಕಾದರೆ ಚಪ್ಪಲಿ ಕಿತ್ತುಹೋಗುತ್ತದೆ.ಚಪ್ಪಲಿಯನ್ನು ಕೈಯಲ್ಲಿ ಹಿಡಿದು ಸ್ವಲ್ಪ ದೂರ ನಡೆದುಕೊಂಡು ಬಂದಮೇಲೆ,ದಾರಿಪಕ್ಕ ಕೂತಿದ್ದ ಚಮ್ಮಾರ ಸಿಗುತ್ತಾನೆ.ಬಿರುಬಿಸಿಲು ಆಗಿದ್ದರಿಂದ ಬೇಂದ್ರೆ ಅಜ್ಜ ಛತ್ರಿಬಿಡಿಸಿಕೊಂಡಿದ್ದರು.ಚಮ್ಮಾರ ತಮ್ಮ ಚಪ್ಪಲಿಯನ್ನು ರಿಪೇರಿ ಮಾಡುವಾಗ ಅವರು ತಮ್ಮ ಛತ್ರಿಯನ್ನು ಬಿಸಿಲಲ್ಲಿದ್ದ ಚಮ್ಮಾರನಿಗೆ ಹಿಡಿದಿದ್ದರು..! ಇದರಿಂದ ಮುಜುಗರಗೊಂಡ ಚಮ್ಮಾರ,'ನಾನು ದಿನಾ ಬಿಸಿಲಲ್ಲೇ ಕೂತು ಕೆಲಸ ಮಾಡುವವನು ನನಗಿದೆಲ್ಲ