Posts

Showing posts from September, 2023

ದಿನಕ್ಕೊಂದು ಕಥೆ 1067

*🌻ದಿನಕ್ಕೊಂದು ಕಥೆ 🌻*                                            *ಕೊರಳಲ್ಲಿ ಚಿನ್ನದ ಪದಕ ಇದ್ದರೂ ಆಕೆಯ ಕಣ್ಣು ಯಾರನ್ನೋ ಹುಡುಕುತ್ತಿತ್ತು!* ಲಂಡನ್ನಿನ ಬರ್ಮಿಂಗ್ಹ್ಯಾಮ್  ನಗರದಲ್ಲಿ ನಡೆದ ಕಾಮನವೆಲ್ತ್ ಗೇಮ್ಸನ ಬಾಕ್ಸಿಂಗ್ ವಿಭಾಗದ ಪದಕ ಪ್ರದಾನ ಕಾರ್ಯಕ್ರಮವು ಒಂದು ಭಾವುಕ ಕ್ಷಣಕ್ಕೆ ಸಾಕ್ಷಿ ಆಯಿತು!  ಆಕೆ ನೀತು ಗಂಘಾಸ್. ವಯಸ್ಸು 21. ಭಾರತದ ಬಾಕ್ಸಿಂಗನ ನವೋದಿತ ತಾರೆ. ಇದು ಆಕೆಯ ಮೊದಲ ಕಾಮನವೆಲ್ತ್ ಗೇಮ್ಸ್ ಆಗಿತ್ತು. ಆಕೆಯನ್ನು ಈಗಲೆ ಜನರು ಬಾಕ್ಸಿಂಗ್ ಲೆಜೆಂಡ್ ಮೇರಿ ಕೋಮ್ ಜೊತೆ ಹೋಲಿಕೆ ಮಾಡಲು ತೊಡಗಿದ್ದರು.  ಕೊರಳಲ್ಲಿ ಚಿನ್ನದ ಪದಕವನ್ನು ತೋಡಿಸಿದಾಗ ಭಾರತದ ತ್ರಿವರ್ಣ ಧ್ವಜ ಮೇಲೇರುವ ಕ್ಷಣ, ಬ್ಯುಗಲ್ ರಾಷ್ಟ್ರಗೀತೆ ಜನಗಣಮನವನ್ನು ನುಡಿಸುವಾಗ ಆಕೆಯ ಕಣ್ಣಲ್ಲಿ ಗಂಗಾ ಭಾಗೀರಥಿ ಎಲ್ಲವೂ ಸುರಿಯಿತು. ಆದರೂ ಆಕೆಯ ಕಣ್ಣು ಯಾರನ್ನೋ ಹುಡುಕುತ್ತಿತ್ತು! ಹೌದು, ಅವಳು ಹುಡುಕುತ್ತ ಇದ್ದದ್ದು ಅವಳ ಪ್ರೀತಿಯ ಅಪ್ಪನನ್ನು! ಅವರ ಹೆಸರು ಜೈ ಭಗವಾನ್. ಹರ್ಯಾಣ ಸರಕಾರಿ ಇಲಾಖೆಯಲ್ಲಿ ಒಬ್ಬ ಸಾಮಾನ್ಯ ನೌಕರ ಆಗಿದ್ದ ಅವರು ತನ್ನ ಮಗಳ ಸಾಧನೆಗೆ ಒತ್ತಾಸೆ ಆಗಿ ನಿಂತವರು. ಕಳೆದ ಮೂರು ವರ್ಷಗಳಿಂದ ಅವರು ವೇತನವಿಲ್ಲದ ರಜೆ ಹಾಕಿ ಮಗಳ ಜೊತೆಗೆ ಓಡಾಟ ಮಾಡುತ್ತಿದ್ದರು! ಮಗಳ ಕೋಚಿಂಗ್, ಆಹಾರ, ಪ್ರಯಾಣ ಎಲ್ಲ ಉಸ್ತುವಾರಿ ಕೂಡ ಅವರದ್ದೇ! ಬೆಳಿಗ್ಗೆ ನಾಲ್ಕು ಗಂಟೆಗೆ ಎದ್ದು ಮಗಳ ಜೊತೆ ಬಾಕ್ಸಿಂಗ್ ರಿಂಗ್ಸಗೆ ಬರುವ ಅಪ್ಪ ಮಧ್ಯ

ದಿನಕ್ಕೊಂದು ಕಥೆ 1066

*🌻ದಿನಕ್ಕೊಂದು ಕಥೆ🌻*                                          *"ಪಾದಚಾರಿ ಮಾರ್ಗದಿಂದ ರಾಷ್ಟ್ರಪತಿಗಳ ಅಂಗಳದವರೆಗೆ"* ಹುಟ್ಟಿದ್ದು ಮಂಜುನಾಥ ಆಗಿ, ಬೆಳೆದಿದ್ದು ಮಂಜಮ್ಮನಾಗಿ. ಆಮೇಲೆ ಹೊಟ್ಟೆಪಾಡಿಗಾಗಿ ಕೈಗೊಂಡ ಕಲಾ ವೃತ್ತಿಯೇ ಇವರನ್ನು ಮಂಜಮ್ಮ ಜೋಗತಿಯನ್ನಾಗಿ ರೂಪಿಸಿತು. ಅವರು ಈಗ ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು ಹೌದು. ಉತ್ತರ ಕರ್ನಾಟಕದ ಭಾಗದಲ್ಲಿ ಈಗಲೂ ಉಳಿದುಕೊಂಡು ಬಂದಿರುವ . ಜೋಗತಿ’ ಕಲಾ ಪ್ರಕಾರದ ಪ್ರಮುಖ ರಾಯಭಾರಿಯೂ ಹೌದು. *ಉರುಳಾದ ಕರಳು ಸಂಬಂಧ :* ಮಂಜುನಾಥ ನಾಗಿದ್ದ ಮಂಜಮ್ಮನ ಜನ್ಮಭೂಮಿ ಬಳ್ಳಾರಿ ಜಿಲ್ಲೆ ಕಲ್ಲುಕಂಬ. ಈಗ ಕರ್ಮಭೂಮಿ ಮರಿಯಮ್ಮನ ಹಳ್ಳಿ. ತಂದೆ ಹನುಮಂತಪ್ಪ ಶೆಟ್ಟಿ, ತಾಯಿ ಜಯಲಕ್ಷ್ಮೀ. ತಂದೆ ಕಂಪ್ಲಿ ಶುಗರ್‌ಫ್ಯಾಕ್ಟರಿಯಲ್ಲಿ ಉದ್ಯೋಗಿ. ಆರು ಎಕರೆ ಜಮೀನು ಅಥವಾ ವ್ಯಾಪಾರ -ಈ ಎರಡರಲ್ಲಿ ಯಾವುದನ್ನುಆಯ್ಕೆ ಮಾಡಿಕೊಂಡರೂ ತಂದೆ-ತಾಯಿಗೆ ಒಪ್ಪಿಗೆ ಇತ್ತು. ಆದರೆ, ತಾನು ಹುಡುಗನಾಗಿ ದುಡಿಯಲಾರೆ, ಹುಡುಗಿಯಂತೆ ನೃತ್ಯ ಮಾಡುವೆ ಎಂದಾಗ ಯಾರೂ ಒಪ್ಪಲಿಲ್ಲ. ಎಸ್‌ಎಸ್‌ಎಲ್‌ಸಿ ಮುಗಿದ ಮೇಲೆ ದೇಹದ ಚಿತ್ರ ಬದಲಾದಂತೆ ಮನೆಯ ಚಿತ್ರವೂ ಬದಲಾಯಿತು. ಹೆಣ್ಣಂತೆ ಇರುವುದನ್ನು ಸಹಿಸದ ಸಮಾಜ ಗೇಲಿ ಮಾಡಿತು. ಕುಟುಂಬದವರು ಕಂಬಕ್ಕೆ ಕಟ್ಟಿ ಹೊಡೆದರು. ಸಂಬಂಧಕ್ಕೆ ಬೇಲಿ ಹಾಕಿದರು. ದುಡಿಯಲೆಂದು ಹಚ್ಚಿದರು. ಅಣ್ಣನೊಂದಿಗೆ ಕಿರಾಣಿ ಅಂಗಡಿ ಕೆಲಸಕ್ಕೆ ಕೂಡಿಸಿದರು. ಸ್ವತಃ ಜೋಗಪ್ಪನಾಗಿ